ಚರ್ಚ್ ಗೆ ತೆರಳಿದ್ದ 85 ವರ್ಷದ ವೃದ್ಧ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಹಳಿಯಾಳದ ಹೊಮ್ನಳ್ಳಿಯಲ್ಲಿ ಸಂಭವಿಸಿದೆ. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ನಗರದಲ್ಲಿ ಎಸ್ಪಿ ಕಚೇರಿಯಿಂದ ಗುರುವಾರ ಸಂಜೆ 7 ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಹಳಿಯಾಳ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.