ಇಂದು ಕುಂದಗೋಳ ನಗರದಲ್ಲಿ ಕುಂದಗೋಳ ತಾಲೂಕ ಮುಸ್ಲಿಂ ಶಾದಿ ಕಮೀಟಿ ಹಾಗೂ ಷಣ್ಮುಖ ಎಸ್ ಶಿವಳ್ಳಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 101ಜೋಡಿ ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಸರಳ ವಿವಾಹ ಸಮಾರಂಭದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಭಾಗವಹಿಸಿ ನವ ಜೋಡಿಗಳಿಗೆ ಶುಭ ಹಾರೈಸಿದರು. ಈ ಶುಭ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಕುಸುಮಾವತಿ ಶಿವಳ್ಳಿ ಉಪಸ್ಥಿತರಿದ್ದರು.