ತಾಲೂಕಿನ ಬನ್ನಿಹಟ್ಟಿ ರೈಲ್ವೆ ಯಾರ್ಡ್ನಲ್ಲಿ ಸುಮಾರು 8 ಸಾವಿರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಲಾಗಿದೆ. ಅದಿರು ಲೂಟಿಯಾಗಿದೆ. ಇಷ್ಟಾದರೂ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಸರಕಾರ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದುಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ ಒತ್ತಾಯಿಸಿದರು. ತಾಲೂಕಿನ ಬನ್ನಿಹಟ್ಟಿ ರೈಲ್ವೆ ಯಾರ್ಡ್ ಹಾಗೂ ಸುಶೀಲಾನಗರದ ಟೋಲ್ ಗೇಟ್ ಸ್ಥಳಕ್ಕೆ ಭಾನುವಾರ ಮಧ್ಯಾಹ್ನ 4ಗಂಟೆಗೆಭೇಟಿ, ನೀಡಿ ಪರಿಶೀಲಿಸಿ ಸುದ್ದಿಗಾರರೋಂದಿಗೆ ಅವರು ಮಾತನಾಡಿದರು. ಯರಯ್ಯನಹಳ್ಳಿಯಲ್ಲಿ ಸುಮಾರು 4 ಎಕರೆ ಜಮೀನಿನಲ್ಲಿ ಸುಮಾರು 3 -4 ಲಕ್ಷಟನ್ ಗ್ರಾವೆಲ್ ಅನ್ನು ಅಕ್ರಮವಾಗಿ ತೆಗೆದು ಸಾಗಿಸಲಾಗಿದೆ. ಈ ಪ್ರಕರಣ ಬಯಲಿಗೆ ಬಂದ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು 11000