ಬೆಂಗಳೂರು ಉತ್ತರ: ಮತ್ತಿಕೆರೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲಿಸಿದ ಪಾಲಿಕೆ ಆಯುಕ್ತರು
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಮತ್ತಿಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನ ಆಯುಕ್ತ ಡಾ.ರಾಜೇಂದ್ರ ಕೆ ವಿ ಅವರು ಪರಿಶೀಲಿಸಿದರು. ಸೆಪ್ಟೆಂಬರ್ 24ರಂದು ಮಧ್ಯಾಹ್ನ 2 ಗಂಟೆಗೆ ಪರಿಶೀಲನೆ ನಡೆಸಿದ ಅವರು, ರಸ್ತೆಗುಂಡಿಗಳನ್ನ ಮುಚ್ಚುವಾಗ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ನಿರ್ದೇಶಿಸಿದರು.ಅಲ್ಲದೆ ಜಲಮಂಡಳಿಯೊಂದಿಗೆ ಸಮನ್ವಯ ಸಾಧಿಸುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.