ಶನಿವಾರ ಸಂಜೆ 4 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮೋದಿ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ವಿಬಿ ಜಿ ರಾಮ್ ಜಿ ಮಸೂದೆ ಅಂಗೀಕರಿಸಿದ್ದಾರೆ. ಮನರೇಗಾ ಯೋಜನೆ ಕಾಯ್ದೆ ಸುಧಾರಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಇವರು ಸುಧಾರಿಸಿಯೂ ಇಲ್ಲ, ಸಬಲೀಕರಣ ಮಾಡಿಲ್ಲ. ಮನರೇಗಾ ಕಾಯ್ದೆಯನ್ನು ತೆಗೆದು ಹಾಕಿದ್ದಾರೆ. ಕಳೆದ 19-20 ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯದ ಗ್ಯಾರಂಟಿ ನೀಡಿತ್ತು. ಮೋದಿ ಸರ್ಕಾರ ಈ ಗ್ಯಾರಂಟಿ ಕಸಿದುಕೊಂಡಿದೆ. ಬೇಡಿಕೆ ಆಧಾರಿತ ಯೋಜನೆ, ವಿತರಣೆ ಆಧಾರಿತ ಯೋಜನೆಯಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿತ್ತು. ಈಗ ಇದು ಕಾಯ್ದೆಯಾಗಿ ಉಳಿದಿಲ್ಲ.ಇತರೆ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ ಎಂದರು