ಸಿರಗುಪ್ಪ: ಅಳಿಗನೂರು ಕ್ರಾಸ್ ಬಳಿ ಲಾರಿ–ಬೈಕ್ ಅಪಘಾತ, ಸವಾರನ ಕಾಲಿಗೆ ಗಂಭೀರ ಗಾಯ, 5ಕಿ.ಮೀ ಟ್ರಾಫಿಕ್
ಸಿರುಗುಪ್ಪ ನಗರದ ಆದೋನಿ ರಸ್ತೆಯ ಅಳಿಗನೂರು ಕ್ರಾಸ್ ಬಳಿ ಮಂಗಳವಾರ (ನ.18) ಸಂಜೆ ಸುಮಾರು 6:30ರ ವೇಳೆಗೆ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನೊಬ್ಬನ ಕಾಲು ಗಂಭೀರವಾಗಿ ಗಾಯಗೊಂಡಿದ್ದು, ಎಲುಬು ಮುರಿದಿದೆ ಎನ್ನಲಾಗಿದೆ. ಗಾಯಾಳುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ನಂತರ ಸ್ಥಳದಲ್ಲಿ ದೊಡ್ಡ ಮಟ್ಟದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸುಮಾರು 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಸರ