ಯಾದಗಿರಿ: ರೈತರಿಗೆ ಪರಿಹಾರ ನೀಡುವಂತೆ ಜಯ ಕರ್ನಾಟಕ ಸಂಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
Yadgir, Yadgir | Sep 29, 2025 ನಿರಂತರ ಸುರಿದ ಮಳೆಯಿಂದ ಜಿಲ್ಲೆಯ ರೈತರ ಬೆಳೆ ಹಾನಿ, ಅನೇಕ ಜನ ಮನೆಗಳು ಕಳೆದುಕೊಂಡು ಹಾಗೂ ಗ್ರಾಮದೊಳಗೆ ನೀರು ಹೊಕ್ಕು ಸಂತ್ರಸ್ತರಾಗಿದ್ದು ಎಲ್ಲರಿಗೂ ಪರಿಹಾರ ನೀಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್ ವಿಶ್ವನಾಥ ನಾಯಕ ನೇತೃತ್ವದಲ್ಲಿ ಸೋಮವಾರ ಮಧ್ಯಾನ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಕೂಡಲೇ ರೈತರಿಗೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡದಿದ್ದಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.