ರಾಜರಾಜೇಶ್ವರಿನಗರ ಜಂಟಿ ಆಯುಕ್ತರ ಕಚೇರಿಯಲ್ಲಿ ಕೆಲ ದಿನಗಳ ಹಿಂದೆ ಲಕ್ಷ್ಮೀದೇವಿ ನಗರ ವಾರ್ಡ್‌ನ ಕೂಲಿ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಹಾನಿಗೊಳಗಾದ ಕುಟುಂಬಗಳ ಸಮಸ್ಯೆಗಳ ಕುರಿತು ಜಿ.ಬಿ.ಎ ಪಶ್ಚಿಮ ಮುಖ್ಯ ಆಯುಕ್ತರೊಂದಿಗೆ ಚರ್ಚೆ ನಡೆಸಲಾಯಿತು. ಪೀಡಿತ ಕುಟುಂಬಗಳಿಗೆ ಅತಿ ಶೀಘ್ರದಲ್ಲಿ ಪರಿಹಾರ ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು. ಇದೇ ಪರಿಶೀಲನಾ ಸಭೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಈಗಾಗಲೇ ನಡೆಯುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಜಿ.ಬಿ.ಎ ಪಶ್ಚಿಮ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾ