ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ ನಗರದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿದ ಸಂಸದ ರಮೇಶ್ ಜಿಗಜಿಣಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ ಹಿನ್ನಲೆ ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು 11ವರ್ಷದ ಕಾಲ ದೇಶದ ಪ್ರಧಾನಮಂತ್ರಿಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಜನ್ಮದಿನದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು ಉತ್ತಮ ಕಾರ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅಭಿಮಾನಿಗಳು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.