ಸಿದ್ದಾಪುರ: ಶಿರಸಿಯಲ್ಲಿ ನಡೆದ 17 ವರ್ಷದೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಿದ್ದಾಪುರ ತಾಲೂಕಿನ ಗುಡ್ಡಗಾಡು ಪ್ರದೇಶವಾದ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಬೈಲ್ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೀರ್ತಿ ಮಂಜುನಾಥ ಗೌಡ ಇವಳು ಎತ್ತರ ಜಿಗಿತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾಳೆ. ಈ ಬಗ್ಗೆ ಗುರುವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿನಿ ಕೀರ್ತಿ ಗೌಡ ಹಾಗೂ ಹಾಗೂ ತರಬೇತಿ ನೀಡಿದ ದೈ. ಶಿ. ಶಿಕ್ಷಕ ವಿನಾಯಕ ನಾಯ್ಕ ರನ್ನು ಎಸ್ ಡಿ. ಎಮ್ ಸಿ ಅಧ್ಯಕ್ಷ ಮಂಜುನಾಥ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್ ಎಚ್ ನಾಯ್ಕ ಅಭಿನಂದಿಸಿದ್ದಾರೆ.