ಗ್ರಾಮ ಪಂಚಾಯಿತಿ ಕಛೇರಿ ದೇವಾಲಯವಿದಂತೆ: ಕ್ಯಾಸಂಬಳ್ಳಿಯಲ್ಲಿ ಶಾಸಕಿ ರೂಪಕಲಾ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಯಲ್ಲಿ ಶಾಸಕಿ ರೂಪಕಲಾ ಶಶಿಧರ್ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಗ್ರಾಮ ಪಂಚಾಯಿತಿ ಕಟ್ಟಡವು ಸುಮಾರು 10-15 ಗ್ರಾಮಗಳಿಗೆ ದೇವಾಲಯವಿದ್ದಂತೆ ಆದ್ದರಿಂದ ಸರ್ಕಾರದ ಸಕಲ ಸೌಲಭ್ಯಗಳು ಸಾರ್ವಜನಿಕರಿಗೆ ದೊರೆಯುವಂತೆ ಆದಾಗ ಮಾತ್ರ ದೇವಾಲಯಕ್ಕೆ ಒಂದು ಅರ್ಥ ಬರುತ್ತದೆ ಎಂದರು. ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು