ನಂಜನಗೂಡು: ನಾಳೆ ಸಿಎಂ ಆಗಮನ ಹಿನ್ನೆಲೆ; ಕಳಲೆ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು: ಏ.12 ರಂದು ನಾಳೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳಲೆ ಗ್ರಾಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮದ ಸಿದ್ಧತೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಪರಿಶೀಲನೆ ನಡೆಸಿದರು. ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳಲೆ ಗ್ರಾಮದ ಗೇಟ್ ನಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರವಾಗಿ ಮತ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.