ಬೆಂಗಳೂರು ಉತ್ತರ: ನಾಳೆ ಮತ್ತೆ ಬ್ರೇಕ್ ಫಾಸ್ಟ್ ಮೀಟಿಂಗ್ ಡಿಕೆ ಹೇಳಿದ್ದೇನು?
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬದಲಾವಣೆಗಳ ನಡುವೆ, ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿರುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ. 'ನಾವು ಇಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ. ಉಪಾಹಾರಕ್ಕೆ ಕರೆಯುವುದು ನಮ್ಮಿಬ್ಬರ ವೈಯಕ್ತಿಕ ವಿಚಾರ. ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ, ನೀವು ಸುಮ್ಮನೆ ಹೇಳಬೇಡಿ. ನನ್ನ ಜೊತೆ 140 ಶಾಸಕರಿದ್ದಾರೆ. ಪಕ್ಷದಲ್ಲಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ನೀವು ಅದರ ಬಗ್ಗೆ ಚಿಂತೆ ಮಾಡಬೇಡಿ' ಎಂದು ಅವರು ತಿಳಿಸಿದ್ದಾರೆ.