ಕಾರವಾರ : ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಗಸ್ಟ್ 1 ರಂದು ಆಯೋಜಿಸುವ ವ್ಯಸನ ಮುಕ್ತ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತೆ ಮತ್ತು ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ನಿರ್ದೇಶನ ನೀಡಿದರು.
ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1 ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ ಎಂದರ