ಸಿರಿಗೆರೆಯ ಬಿ.ಎಲ್.ಆರ್.ವಸತಿ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಉದ್ದ ಜಿಗಿತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೋಮವಾರ ಸಂಜೆ 5.30 ಕ್ಕೆ ಈ ಬಗ್ಗೆ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಎಲ್.ಆರ್.ವಸತಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿ ಎಲ್.ಹೆಚ್.ಅಭಿ ಅವರು ಬೆಂಗಳೂರಿನಲ್ಲಿ ನಡೆದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟ ಉದ್ದ ಜಿಗಿತ ಸ್ಪರ್ಧೆಯಲ್ಲಿ 6.81 ಮೀ. ಜಿಗಿಯುವ ಮೂಲಕ ರಾಜ್ಯಮಟ್ಟದಲ್ಲಿ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ