ರಾಯಚೂರು: ನಗರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ, 1288ನೇ ದಿನ ಪೂರ್ಣ
ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 1288ನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ಸರಕಾರದ ಪ್ರಸ್ತಾವನೆಗೆ ಗೌರವಿಸಿ, ಸುಧೀರ್ಘವಾಗಿ ನಡೆಯುತ್ತಿರುವ ಹೋರಾಟಕ್ಕೆ ಸ್ಪಂದಿಸಿ ಶೀಘ್ರದಲ್ಲಿಯೇ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಗುರುವಾರ 11 ಗಂಟೆಗೆ ನಡೆದ ಧರಣಿ ಸತ್ಯಾಗ್ರಹದಲ್ಲಿ ವಿಶೇಷ ಅತಿಥಿಗಳಾಗಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಇಂದು ಏಮ್ಸ್ ಹೋರಾಟ ವೇದಿಕೆಗೆ ಆಗಮಿಸಿದ ನಾಗರಾಜ್ ಬಾಗಲಕೋಟೆಯವರು ಇಂದಿನ ಧರಣಿಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದರು.