ನಾಯಕನಹಟ್ಟಿ-:ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ಹೊಂದಿರಬೇಕು.ಮನೆಯಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು. ಮಕ್ಕಳಿಗಾಗಿಯೇ ಸರ್ಕಾರದಿಂದ ವಿಶೇಷ ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು ಎಂದು ಎನ್ ಮಹದೇವಪುರ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ ಹೇಳಿದರು. ಶುಕ್ರವಾರ ಸಮೀಪದ ಎನ್.ಮಹದೇವಪುರ: ಮಹಿಳಾ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಬಿ.ತಿಪ್ಪೇಸ್ವಾಮಿ. ಮಾತನಾಡಿದರು.ಬಾಲ್ಯದಲ್ಲಿ ಮಕ್ಕಳು ತಮ್ಮ ಹಕ್ಕುಗಳ ಕುರಿತಾದ ಜ್ಞಾನದಿಂದ ವಂಚಿತರಾದರೆ, ಭವಿಷ್ಯದಲ್ಲಿ ಅವರಿಗೆ ಲಭಿಸಬಹುದಾದ ಪ್ರಯೋಜನಗಳಿಂದ ವಂಚಿತರಾಗಬೇಕಾಗುತ್ತದೆ ಎಂದರು.