ತೀರ್ಥಹಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ 19 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಹಿನ್ನಲೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ತೀರ್ಥಹಳ್ಳಿಯ ತುಂಗಾ ದಡದಲ್ಲಿ ಶ್ರೀರಾಮ ಮಂಟಪ ಬಳಿ ಕಿರು ಸೇತುವೆ ನಿರ್ಮಾಣ ಕಾರ್ಯ ಬರದಿಂದ ಸಾಗಿದೆ. ಇನ್ನ ಪಟ್ಟಣ ಪಂಚಾಯಿತಿ ವತಿಯಿಂದ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನ ಕೈಗೊಳ್ಳಲಾಗುತ್ತಿದೆ ಎಂದು ಪ್ರಭಾರ ಅಧ್ಯಕ್ಷ ಗೀತಾ ರಮೇಶ್ ಶುಕ್ರವಾರ ತಿಳಿಸಿದ್ದಾರೆ.