ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿ: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳನ್ನು ತಡೆಯಲು ರಿವರ್ಸ್ ಹಾಗೂ ಆಪೋಸಿಟ್ ಡ್ರೈವಿಂಗ್ ಮಾಡುವವರ ಮೇಲೆ ನಿಗಾ ವಹಿಸಲು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಆದೇಶಿಸಿದ್ದಾರೆ. ಸಾರಿಗೆ, ಪೊಲೀಸ್ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.