ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಗೆ ಜೀವಕಳೆ ಪಡೆದುಕೊಂಡ ವಿಶ್ವವಿಖ್ಯಾತ ಜೋಗ ಜಲಪಾತ
ಶಿವಮೊಗ್ಗ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಜೀವ ಕಳೆ ಪಡೆದುಕೊಂಡ ವಿಶ್ವವಿಖ್ಯಾತ ಜೋಗ ಜಲಪಾತ ಕಳೆದ ಒಂದು ವಾರದಿಂದ ಶಿವಮೊಗ್ಗದ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಆಗ್ತಾ ಇದೆ ಮಳೆಯಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.ಮಂಗಳವಾರದಂದು ಪ್ರವಾಸಿಗರು ಜೋಗ ಜಲಪಾತ ವೀಕ್ಷಣೆಗೆ ಧಾವಿಸಿದ್ದಾರೆ.ಪ್ರಕೃತಿಯ ರಮಣೀಯ ದೃಶ್ಯದ ನಡುವೆ ಹಾಲಿನ ನೋರೆಯಂತೆ ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮಾರುಹೋಗಿದ್ದು, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮುಂಬರುವ ದಿನಗಳಲ್ಲಿ ಅತಿ ಹೆಚ್ಚು ಪ್ರವಾಸಿಗರು ಜೋಗ ಜಲಪಾತ ವೀಕ್ಷಣೆಗೆ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ.