ಬೆಳಗಾವಿ ನಗರದಲ್ಲಿ ಇಂದು ಶುಕ್ರವಾರ 12 ಗಂಟೆಗೆ ಹಲಗಾ ಬಳಿ ಇರುವ ಸುವರ್ಣಸೌಧದ ಮುಂದೆ ಭವನೇಶ್ವರಿ ಪುತ್ಥಳಿ ನಿರ್ಮಾಣ ಮಾಡುವಂತೆ ಕರವೇ ಶಿವರಾಮೇಗೌಡ ಬಣದ ಜಿಲ್ಲಾ ಘಟಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ವತಿಯಿಂದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶ್ರೀನಿವಾಸ ತಾಳೂರಕರ ಅವರು ಬರುವ ಚಳಿಗಾಲದ ಅಧಿವೇಶನದಲ್ಲಿ ಪುತ್ಥಳಿ ಕಾಮಗಾರಿಗೆ ಚಾಲನೆ ನೀಡಬೇಕು ಇಲ್ಲವಾದರೆ ನಾವೇ ಸ್ವತಃ ಕಾಮಗಾರಿಗೆ ಚಾಲನೆ ನೀಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಆಗ್ರಹಿಸಿದರು.