ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನ ಆಚರಣೆ: ನಗರದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ
ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಸೋಮವಾರ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿ,ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, ಆಕರ್ಷಕ ಪಥಸಂಚಲನ ಹಾಗೂ ಸ್ವಾತಂತ್ರ್ಯೋತ್ಸವದ ಸಂದೇಶ, ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.