ಹುಬ್ಬಳ್ಳಿ: ನಗರದ ಬೈಪಾಸ್ನ ನೇಕಾರ ನಗರ ಬ್ರಿಡ್ಜ್ ಬಳಿ ಲಾರಿ ಓವರ್ಟೇಕ್ ಮಾಡಲು ಯತ್ನಿಸಿದಾಗ, ಹುಬ್ಬಳ್ಳಿಯಿಂದ ಸವಣೂರ ಕಡೆ ಹೊರಟಿದ್ದ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್ನ ಮುಂಭಾಗ ಜಖಂಗೊಂಡಿದ್ದು, ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.