ನೆಲಮಂಗಲ: ಗಡಿ ಭಾಗದಲ್ಲಿ ಕನ್ನಡ ಅಸ್ತಿತ್ವವನ್ನು ಉಳಿಸಲು ಪಣ ಶಾಸಕ ಜಿ.ಕೆ. ವೆಂಕಟರಾಮರೆಡ್ಡಿ
ಶ್ರೀನಿವಾಸಪುರ: ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆಯಿಂದ ಭಾನುವಾರ ಕರ್ನಾಟಕ ರಾಜ್ಯೋತ್ಸವ ನಡೆಯಿತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದರು. ಪ್ರಾಚೀನ ಭಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿಭಾಗಗಳಲ್ಲಿ ಉಳಿಸಿಕೊಳ್ಳಲು ನಾವೆಲ್ಲರೂ ಪಣ ತೊಡಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಆದ್ಯ ಕರ್ತವ್ಯ ನಮ್ಮ ನಿಮ್ಮಲ್ಲರ ಮೇಲೆ ಇದೆ ಎಂದರು. ವರ್ಷಕ್ಕೊಮ್ಮೆ ರಾಜ್ಯೋತ್ಸವ ಹೆಸರಿನಲ್ಲಿ ಹಬ್ಬ ಆಚರಿಸುವ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ. ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ಹೇಳಿದರು.