ದಾಂಡೇಲಿ: ನಾಳೆ ಅ.30 ರಂದು ನಗರದ ಸಾರಿಗೆ ಕಚೇರಿಯಲ್ಲಿ ಸಾರಿಗೆ ಅದಾಲತ್
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಅ.30 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು, ವಾಹನಗಳ ಮಾಲಕರು ಮತ್ತು ಚಾಲಕರು ಈ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ದಾಂಡೇಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವಿನಾಶ ಕಾವೇರಿಯವರು ಇಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಸುಮಾರಿಗೆ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.