ಭದ್ರಾವತಿ: ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಣೆ
ಕಾಲೇಜು ಶಿಕ್ಷಣ ಇಲಾಖೆ ಸರ್ ಎಂವಿ ಸರಕಾರಿ ವಿಜ್ಞಾನ ಕಾಲೇಜು ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಮಹಿಳಾ ಸಬಲೀಕರಣ ಘಟಕದಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಅಶೋಕ ಎಂ ವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಅಂತೆಯೇ ಸಭಾ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭದ್ರಾವತಿ ತಾಲೂಕು ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಕ ಅಧಿಕಾರಿ ಸುಶೀಲಾ ಬಾಯಿ ಭಾಗವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಕ್ರಮ ಅಧಿಕಾರಿ ಡಾ. ಅರಸಯ್ಯ ಮತ್ತು ಸೃಜನ ಸೇರಿದಂತೆ ಯಶಸ್ವಿನಿ ಹಾಗೂ ಪ್ರಮುಖರು ಇದ್ದರು.