ಕಲಬುರಗಿ: ಸಿಎಂ ಸಿದ್ದರಾಮಯ್ಯರಿಗೆ ಮನವಿಪತ್ರಗಳ ಮಹಾಪುರ: ನಗರದಲ್ಲಿ ಜನರ ಬೇಡಿಕೆ ಆಲಿಸಿದ ಮುಖ್ಯಮಂತ್ರಿ
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿಪತ್ರಗಳ ಮಹಾಪುರವೇ ಹರಿದುಬಂದಿತು. ರೈತ ಮುಖಂಡರು, ಕನ್ನಡಪರ ಸಂಘಟನೆಗಳ ನಾಯಕರು ಹಾಗೂ ವಿವಿಧ ಕ್ಷೇತ್ರದ ಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಎಂಗೆ ಮನವಿ ಸಲ್ಲಿಸಿದರು. ಜನರ ಮಾತುಗಳನ್ನು ಮನಗಂಡ ಸಿಎಂ ಸಿದ್ದರಾಮಯ್ಯ, ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.