ಮಂಗಳೂರು: ದಕ್ಷಿಣ ಕನ್ನಡದಲ್ಲಿ ಗೋಹತ್ಯೆ ನಿಷೇಧಕ್ಕೆ 10 ಲಕ್ಷ ಸಹಿ ಅಭಿಯಾನ ಆರಂಭ
ಗೋಹತ್ಯೆ ಸಂಪೂರ್ಣ ನಿಷೇಧ ಹಾಗೂ ಗೋವನ್ನು ರಾಷ್ಟ್ರಮಾತೆಯಾಗಿ ಘೋಷಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡದಲ್ಲಿ 10 ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಡಿಸೆಂಬರ್ 17ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಸಹಿಪತ್ರಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ವಿ.ಎಚ್.ಪಿ ತಿಳಿಸಿದೆ.