ಶಿವಮೊಗ್ಗ: ನಗರದಲ್ಲಿ ಅರಣ್ಯಾಧಿಕಾರಿಗಳೊಂದಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಭೆ
ಶಿವಮೊಗ್ಗ ನಗರದ ಅರಣ್ಯ ಭವನದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ್ ಕಂಡ್ರೆ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು. ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಅನೇಕ ವರ್ಷಗಳಿಂದ ಉಳಿಮೆ ಮಾಡುತ್ತಿರುವ ಬಗರ್ ಹುಕುಂ ಸಾಗವಳಿ ರೈತರಿಗೆ ಶೀಘ್ರ ಹಕ್ಕು ಪತ್ರ ನೀಡುವ ಕುರಿತು, ಶರಾವತಿ ಜಲಾಶಯ ನಿರ್ಮಾಣ ಮಾಡಲು ಜಮೀನು ನೀಡಿದ ರೈತರಿಗೆ ಶಾಶ್ವತ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ,ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.