ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಕಂಪ್ಲಿ–ಗಂಗಾವತಿ ಸಂಪರ್ಕ ಸೇತುವೆಯ ಬೇಸ್ಮೆಂಟ್‌ನಿಂದ ಕಳೆದ 4 ತಿಂಗಳುಗಳಿಂದ, ನಿರಂತರವಾಗಿ ನೀರು ಸೋರಿಕೆಯಾಗುತ್ತಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸೇತುವೆಯ ತಳಭಾಗದಿಂದ ನೀರು ಹರಿದುಬರುತ್ತಿರುವುದರಿಂದ ಸೇತುವೆಯ ಬಲ ಕುಂದುವ ಸಾಧ್ಯತೆ ಬಗ್ಗೆ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಡಿ.12, ಶುಕ್ರವಾರ ಮಧ್ಯಾಹ್ನ 3ಕ್ಕೆ, ಈ ಕುರಿತು ದಿಶಾ ಸಮಿತಿ ಸದಸ್ಯ ಎ.ಸಿ. ದಾನಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಅವರು ಲೋಕೋಪಯೋಗಿ ಇಲಾಖೆ ತಕ್ಷಣ ಸೇತುವೆಯನ್ನು ತಾಂತ್ರಿಕವಾಗಿ ಪರಿಶೀಲಿಸಬೇಕೆಂದು