ಹಬ್ಬುವಾಡಾದ ಗುನಗಿ ಸಮಾಜ ಸಂಘದ ವತಿಯಿಂದ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಶನಿವಾರ ಸಂಜೆ 4ಕ್ಕೆ ಶಾಸಕ ಸತೀಶ್ ಕೆ. ಸೈಲ್ ಅವರು ಭೂಮಿಪೂಜೆ ನೆರವೇರಿಸಿದರು. ಶಾಸಕ ಸತೀಶ್ ಕೆ. ಸೈಲ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗುನಗಿ ಸಮಾಜದ ಅಧ್ಯಕ್ಷರು, ಸಂಘದ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.