ಬೆಂಗಳೂರು ಉತ್ತರ: ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಮತ್ತು 22 ರಂದು ಸಮೀಕ್ಷೆಗೆ ಬ್ರೇಕ್: ನಗರದಲ್ಲಿ ಶಿವರಾಜ್ ತಂಗಡಗಿ
ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯ ಬಳಿಕ ರಾತ್ರಿ 7 ಗಂಟೆ ಸುಮಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಇನ್ನೂ 9 ದಿನ ನಡೆಯಲಿರುವ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನ ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.