ಧಾರವಾಡದಿಂದ ಹುಬ್ಬಳ್ಳಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ವಾಗ್ವಾದ ಉಂಟಾಗಿ ಅದು ಕೈಕಾಲುಜಗಳದ ಮಟ್ಟಿಗೆ ತಲುಪಿದ ಘಟನೆ ಎಪಿಎಂಸಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಚಿಲ್ಲರೆ ಹಣ ನೀಡದೆ ಬೇರೆ ನಿಲ್ದಾಣದಲ್ಲಿ ಇಳಿಸಿದ ವಿಚಾರಕ್ಕೆ ಕೋಪಗೊಂಡ ಪ್ರಯಾಣಿಕನು ಕಂಡಕ್ಟರ್ಗೆ ಅಶ್ಲೀಲ ಪದಗಳಲ್ಲಿ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಕಂಡಕ್ಟರ್ ಕೂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾನೆ.ಇಬ್ಬರ ನಡುವಿನ ಗಲಾಟೆಯಿಂದ ಕೆಲ ಕಾಲ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಹ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಜಗಳವನ್ನು ಶಮನಗೊಳಿಸಿದರು. ಎಪಿಎಂಸಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.