ಮದ್ದೂರು: ವಳಗೆರೆಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ನೂರಾರು ಕೋಳಿಗಳು ಬಲಿ
Maddur, Mandya | Nov 11, 2025 ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿ, ನೂರಾರು ಕೋಳಿಗಳ ಬಲಿ ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳು 400 ಕೊಡಿಗಳ ಮೇಲೆ ದಾಳಿ ನಡೆಸಿರುವ ಘಟನೆ ಜರುಗಿದೆ. ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದ ಪ್ರಕಾಶ್ ಎಂಬುವವರಿಗೆ ಸೇರಿದ ಕೋಳಿ ಸಾಕಾಣಿಕೆ ಘಟಕಕ್ಕೆ ನುಗ್ಗಿ ಸುಮಾರು 400 ಕೋಳಿಗಳ ಮೇಲೆ ದಾಳಿ ನಡೆಸಿವೆ. ಈ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಕೋಳಿಗಳನ್ನು ಕಳೆದುಕೊಂಡು ರೈತ ಕಂಗಾಲಾಗಿದ್ದಾರೆ. ರೈತ ಪ್ರಕಾಶ್ ಅವರು ಪರಿಹಾರಕ್ಕಾಗಿ ತಾಲ್ಲೂಕು ಆಡಳಿತಕ್ಕೆ ಮಂಗಳವಾರ ಮಧ್ಯಾನ ಒಂದು ಗಂಟೆಯಲ್ಲಿ ಮನವಿ ಮಾಡಿದ್ದಾರೆ.