ಶಿವಮೊಗ್ಗ: ನಗರದಲ್ಲಿ ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ನಗರದಲ್ಲಿ ನೂತನವಾಗಿ ಆರಂಭಿಸಿರುವ ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ. ಭಾನುವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಜ್ರ ಮಹೋತ್ಸವದ ವರ್ಷಾಚರಣೆ ಅಂಗವಾಗಿ ಸಂಘದ ಅಧಿಕೃತ ಕಟ್ಟಡದ ಮೊದಲ ಮಹಡಿಯಲ್ಲಿ ಜಿಲ್ಲಾ ವಿದ್ಯಾವಂತ ನಿರುದ್ಯೋಗಿಗಳಿಗೆ ಕೌಶಲ್ಯ ನೀಡುವ ಮತ್ತು ಜಿಲ್ಲಾ ಕೈಗಾರಿಕೋದ್ಯಮಗಳಿಗೆ ಹಾಗೂ ವಾಣಿಜ್ಯೋದ್ಯಮಿಗಳಿಗೆ ಪೂರಕವಾದ ಕೌಶಲ್ಯಯುಕ್ತವಾದ ಉದ್ಯೋಗವಕಾಶ ಒದಗಿಸುವ ದೃಷ್ಟಿಯಿಂದ ನೂತನವಾಗಿ ತೆರೆದಿರುವ ಅಡ್ವಾನ್ಸ್ ಸ್ಕಿಲ್ ಅಕಾಡೆಮಿಯನ್ನು ಸಂಸದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.