ದಾವಣಗೆರೆ: ಬರ ಪರಿಹಾರ ನೀಡದ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ಹಳ್ಳಿಗಳ ಪ್ರವೇಶ ನಿರ್ಭಂಧಿಸಿ;ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬರು ಶಾಂತಕುಮಾರ್
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟ ಕಾಲದಲ್ಲಿ ಜಗಳವಾಡುತ್ತಾ ಮನರಂಜನೆ ನಿಡುತ್ತಿದ್ದಾರೆ. ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ ಈ ನಾಟಕ ಬಿಡಿ .ಪರಿಹಾರ ನೀಡಿ. ಇಲ್ಲವೇ ಮತ ಕೇಳಲು ಬರಬೇಡಿ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ರೈತರಿಗೆ ಕರೆ ನೀಡಿದರು.ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲವಾಗಿದ್ದಾರೆ ರಾಜಕೀಯ ಮುಖಂಡರಿಗೆ ಅಧಿಕಾರದ ಹುಚ್ಚು ರೈತರಿಗೆ ಜೀವನದ ಸಂಕಷ್ಟ, ರೈತರ ಬದುಕು ರಕ್ಷಿಸುವವರು ಯಾರು ಎಂದು ಹೇಳಿದರು ಈ ಸಂದರ್ಭದಲ್ಲಿ ಬಲ್ಲೂರು ರವಿಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.