ನಗರದ ಹಬ್ಬುವಾಡಾದ ಶ್ರೀ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಗುರುವಾರ ಸಡಗರ ಸಂಭ್ರಮದಿಂದ ನಡೆಯಿತು. ಗುರುವಾರ ಸಂಜೆ 6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆದವು. ಜಾತ್ರಾ ಮಹೋತ್ಸವದ ಅಂಗವಾಗಿ ಕಾರವಾರ ನಗರ ಸೇರಿದಂತೆ ವಿವಿಧ ಕಡೆಗಳಿಗಿಂದ ಸಾರ್ವಜನಿಕರು ಆಗಮಿಸಿ ದೇವನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿದರು