ಚಿತ್ರದುರ್ಗದಲ್ಲಿ ವಕೀಲರ ಸಂಘದ ವತಿಯಿಂದ ಅಂಬೇಡ್ಕರ್ ರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಶನಿವಾರ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ರ ಪರಿನಿರ್ವಾಣ ದಿನಾಚರಣೆ ಹಿನ್ನೆಲೆ ಜಿಲ್ಲಾ ನ್ಯಾಯಾಲಯದ ಆವರಣದಿಂದ ಅಂಬೇಡ್ಕರ್ ರ ಭಾವಚಿತ್ರವನ್ನ ಸಾರೋಟಿನಲ್ಲಿ ಕೂರಿಸಿ ಮೆರವಣಿಗೆ ಹಮ್ಮಿಕೊಂಡಿದ್ದು ಓಬವ್ವ ವೃತ್ತದ ಮೂಲಕ ಅಂಬೇಡ್ಕರ್ ವೃತ್ತಕ್ಕೆ ಮೆರವಣಿಗೆ ಆಗಮಿಸಿದ್ದು ಅಂಬೇಡ್ಕರ್ ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅಂಬೇಡ್ಕರ್ ರ ಪರಿ ನಿರ್ವಾಣ ದಿನಾಚರಣೆ ಆಚರಿಸಿದ್ದಾರೆ.