ಡಿ.16,ಮಂಗಳವಾರ ಸಂಜೆ 6ಕ್ಕೆ ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯದ ಚಳಿಗಾಲದ ಅಧಿವೇಶನದಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಬಳ್ಳಾರಿ ಜಿಲ್ಲೆಯಲ್ಲಿ ಕಿಡ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (KIDWAI) ಆಸ್ಪತ್ರೆ ಸ್ಥಾಪನೆ ಕುರಿತು ಸದನದ ಗಮನ ಸೆಳೆದರು. ಉತ್ತರ ಕರ್ನಾಟಕ ಭಾಗದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕ್ಯಾನ್ಸರ್ ಚಿಕಿತ್ಸೆಗೆ ಕಿಡ್ವಾಯಿ ಆಸ್ಪತ್ರೆ ಅತ್ಯಂತ ಅನುಕೂಲಕರವಾಗಲಿದೆ ಎಂದು ಅವರು ತಿಳಿಸಿದರು. ಪ್ರಸ್ತುತ ಚಿಕಿತ್ಸೆಗಾಗಿ ದೂರದ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಗೆ ತೆರಳಬೇಕಾಗಿರುವುದರಿಂದ ಜನರು ಆರ್ಥಿಕ ಮತ್ತು ಮಾನಸಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.