ಲಂಚ ಪಡೆದ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸೋಮವಾರ ಲಕ್ಷ್ಮೀನಾರಾಯಣ ಎಂಬುವರು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದು, ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಅಬಕಾರಿ ಡಿಸಿ ಜಗದೀಶ್ ಮಾತನಾಡಿದ್ದ ಆಡಿಯೋವನ್ನು ಲಕ್ಷ್ಮೀನಾರಾಯಣ ಬಿಡುಗಡೆ ಮಾಡಿದ್ದರು.