ಮಂಡ್ಯ: ಒಕ್ಕಲಿಗ ಅಭಿವೃದ್ಧಿ ನಿಗಮದಲ್ಲಿ ಸೇವೆ ಮಾಡುವ ಅವಕಾಶ ಸಿಕ್ಕಿದೆ: ನಗರದಲ್ಲಿ ನೂತನ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಸಂತಸ
Mandya, Mandya | Oct 2, 2025 ಒಕ್ಕಲಿಗ ಅಭಿವೃದ್ಧಿ ನಿಗಮದಲ್ಲಿ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ನೂತನ ಅಧ್ಯಕ್ಷರಾದ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರು ಸಂತಸ ವ್ಯಕ್ತಪಡಿಸಿದರು. ಗುರುವಾರ ಮಂಡ್ಯದ ಸುಬಾಷ್ ನಗರದ ಅವರ ಮನೆಯಲ್ಲಿ ಬೂದನೂರು ಅಭಿಮಾನಿಗಳ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ 50 ವರ್ಷಗಳ ರಾಜಕೀಯ ಜೀವನದಲ್ಲಿ ಬೂದನೂರು ಸೇರಿದಂತೆ ತಾಲ್ಲೂಕಿನ ಜನತೆ ನನ್ನ ಬೆಂಬಲಿಸಿ ಆಶೀರ್ವದಿಸಿದ್ದಾರೆ ಎಂದರು. ಒಕ್ಕಲಿಗ ಅಭಿವೃದ್ಧಿ ನಿಗಮ ಅಧ್ಯಕ್ಷನಾಗಿ ಸಿಎಂ ಸಿದ್ದರಾಮಯ್ಯ, ಸಚಿವರು, ಜಿಲ್ಲೆಯಲ್ಲಿ ಶಾಸಕರು ಜವಾಬ್ದಾರಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರ ಸಲಹೆ, ಸಹಕಾರ ಪಡೆದು ನಿಗಮದಲ್ಲಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಮುಖಂಡರಾದ ಕೀರ್ತಿಕುಮಾರ್ ಸೇರಿದಂತೆ ಹಲವರಿದ್ದರು.