ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಖಾಲಿ ಇರುವ ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ವಿ.ರಶ್ಮಿ ಮಹೇಶ ಹೇಳಿದರು. ಸೋಮವಾರ 1 ಗಂಟೆಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಇಟಿ ಪರೀಕ್ಷ ನಂತರ ಸರಕಾರದ ಏನು ನಿರ್ದೇಶನ ನೀಡುತ್ತೊ ಅದರ ಪ್ರಕಾರವಾಗಿ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಮಾಡುತ್ತೇವೆ ಎಂದರು.