ಹೊಸ ವರ್ಷಕ್ಕೆ ಶುಭ ಕೋರಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯದ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಈ ಹೊಸ ವರ್ಷ ಎಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರುವಂತೆ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ದೇಶದ ಜನ ಕೂಡ ಸುಖ ಸಮೃದ್ಧಿಯಿಂದ ಬಾಳಿ ಬದುಕುವಂತಾಗಲಿ ಎಂದು ನಾನು ಶುಭ ಹಾರೈಸುತ್ತೇನೆ ಎಂದರು.