ತೀರ್ಥಹಳ್ಳಿ: ತೀರ್ಥಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿ:ಜಿಂಕೆ ಸಾವು
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಶನಿವಾರ ನಡೆದಿದೆ. ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ದಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದ್ದು, ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.ವಿಷಯ ತಿಳಿದ ಕೂಡಲೇ ಘಟನ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.