ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರಿಂದ ಹವಾಮಾನ ಆಧಾರಿತ ಬೆಳೆ ವಿಮೆಗೆ ಅರ್ಜಿ ಆಹ್ವಾನ: ತೋಟಗಾರಿಕೆ ಇಲಾಖೆ ಚಿಕ್ಕಬಳ್ಳಾಪುರ ಪ್ರಕಟಣೆ
2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳ ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBICS) ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಅಧಿಸೂಚನೆ ಆದೇಶ ಹೊರಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಇಂದು ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾವು, ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಳನ್ನು ವಿಮೆ ಅಡಿ ಅಧಿಸೂಚಿಸಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲುಕುಗಳು ಈ ಯೋಜನೆ ಅಡಿ ಬರುತ್ತದೆ. ಈ ಯೋಜನೆಯಲ್ಲಿ ಅಧಿಸೂಚಿಸಿದ ಬೆಳೆಗಳಿಗೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಇಚ್ಚೆಯನುಸಾರ ವಿಮಾ ಪಾವತಿಸಬಹುದಾಗಿರುತ್ತದೆ ಎಂದು ಇಲಾಖೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ