ವಿಧಾನಸೌಧದಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದ್ವೇಷ ಭಾಷಣ ಮಸೂದೆ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಮಸೂದೆಯಲ್ಲಿ ವ್ಯಾಖ್ಯಾನ ಸ್ಪಷ್ಟತೆ ಇದೆ. ಹಲವು ವಿಧೇಯಕಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಲಾಗಿದೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕ್ಕೆ ಅನುಮೋದನೆ ಮಾಡಲಾಗಿದೆ. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಅನುಮೋದನೆ ನೀಡಲಾಗಿದೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಅನುಮೋದನೆ ನೀಡಲಾಗಿದೆ ಎಂದರು.