ಸಕಲೇಶಪುರ: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ವಾಹನ ಸವಾರರು ಹೈರಾಣ!
ಹಾಸನ :ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಸಂಖ್ಯೆಯಲ್ಲಿ ಜನ ತೆರಳುತ್ತಿದ್ದಾರೆ. ಪರಿಣಾಮ ಸಕಲೇಶಪುರ ಶಿರಾಡಿಘಾಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.ಸಾವಿರಾರರು ವಾಹನಗಳಲ್ಲಿ ಬೆಂಗಳೂರಿನಿಂದ ಮಂಗಳೂರು, ಮಂಗಳೂರು ಕಡೆಯಿಂದ ಬೆಂಗಳೂರಿಗೆ ಜನ ತೆರಳುತ್ತಿದ್ದಾರೆ. ಇದರಿಂದ ಸುಮಾರು ಅರ್ಧ ಗಂಟೆಯಿಂದ ವಾಹನಗಳು ಕಿಲೋ ಮೀಟರ್ಗಟ್ಟಲೇ ಸಾಲುಗಟ್ಟಿ ನಿಂತಿವೆ. ಟ್ರಾಫಿಕ್ ಜಾಮ್ನಿಂದ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ದಸರಾ ಪ್ರಯುಕ್ತ ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರು ಪ್ರವಾಸಿ ತಾಣಗಳುಗೆ ತೆರಳುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಕೆಲಸ ಮಾಡುವವರು ಸ್ವಂತ ಊರಿಗೆ ತೆರಳುತ್ತಿದ್ದಾರೆ.