ಬಾಶೆಟ್ಟಿಹಳ್ಳಿಯಲ್ಲಿ ಭಾನುವಾರ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯ ಮತಗಟ್ಟೆ ಸಂಖ್ಯೆ 17ರಲ್ಲಿ ಮತಗಳ್ಳತನ ನಡೆದಿದೆ. ಮತದಾನಕ್ಕೆ ಬಂದ ಯುವಕನೊಬ್ಬ ತನ್ನ ಮತವನ್ನು ಬೇರೊಬ್ಬರು ಹಾಕಿದ್ದಾರೆಂದು ತಿಳಿದು ಆಘಾತಕ್ಕೊಳಗಾಗಿದ್ದಾನೆ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪರಿಶೀಲನೆ ನಡೆಸಲಾಗಿದೆ. ಗ್ರಾಮಸ್ಥರು ನಕಲಿ ಮತದಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.