ಬಂಗಾರಪೇಟೆ: ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸಾಮೊಹಿಕವಾಗಿ ಉಮೇದುವಾರಿಕೆ ಸಲ್ಲಿಕೆ
ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ 12ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆಗೆ ಕೊನೆ ದಿನವಾದ ಭಾನುವಾರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸಾಮೊಹಿಕವಾಗಿ ಬಂದು ತಮ್ಮ ಉಮೇದುವಾರಿಕೆ ಸಲ್ಲಿಸಿ ಒಗ್ಗಟ್ಟನ್ನು ಪ್ರದರ್ಶಿಸಿದರು. ಬಿ ವರ್ಗದ 8 ಸ್ಥಾನಗಳಿ ಮತ್ತು ಎ ವರ್ಗದ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರು ಗೆಲ್ಲುವ ಮೂಲಕ ದಾಖಲೆ ಬರೆಯಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿರುವುದರಿಂದ ಕ್ಷೇತ್ರದ ಶೇರುದಾರರು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಬಲಪಡಿಸಲು ಮುಂದಾಗಿದ್ದಾರೆ.