ಬೆಂಗಳೂರು ಉತ್ತರ: ಕಬ್ಬಿನ ಎಫ್.ಆರ್.ಪಿ ದರ ನಿಗದಿ ಕೇಂದ್ರದ ಅಧಿಕಾರ, ಅನುಷ್ಠಾನ ರಾಜ್ಯದ ಜವಾಬ್ದಾರಿ: ಸಿದ್ದರಾಮಯ್ಯ
ಎಫ್.ಆರ್.ಪಿ (ನ್ಯಾಯಯುತ ಹಾಗೂ ಲಾಭದಾಯಕ ಬೆಲೆ) ಯನ್ನು ಕೇಂದ್ರ ಸರ್ಕಾರವೇ ನಿಗದಿ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನಿಗದಿ ಮಾಡಿದ ದರವನ್ನು ರೈತರಿಗೆ ನಿಜವಾಗಿಯೂ ದೊರಕಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಇದೇ ರೀತಿಯಲ್ಲಿ ರೈತರಿಗೆ ತೂಕದ ನಿಖರತೆ, ಬೆಲೆ ಪಾವತಿ ಹಾಗೂ ನಿಗದಿತ ಅವಧಿಯಲ್ಲಿ ಪಾವತಿಯನ್ನು ನೋಡಿಕೊಳ್ಳುವುದೂ ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿ ಆಗಿದ್ದು, ಕಬ್ಬು ನಿಯಂತ್ರಣಕ್ಕೆ ಸಂಬಂಧಿಸಿದ ಕಾಯ್ದೆಯಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.